ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡಿದ ಪ್ರಕರಣ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದ್ದು, ಪರೀಕ್ಷಾ ಕೊಠಡಿ ಮೇಲ್ವಿಚಾರಕರಾಗಿದ್ದ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹುಣಸಗಿ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್.ಎಸ್.ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಪ್ರಥಮ ಭಾಷೆ ಪರೀಕ್ಷೆ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿಗಳು ನಕಲು ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಜಿಲ್ಲಾ ಪಂಚಾಯಯತ್ ಮುಖ್ಯಕಾರ್ಯನಿರ್ವಾಹಣ ಅಧಿಕಾರಿ ಸಿಸಿ ಕ್ಯಾಮರಾ ಪರಿಶೀಲನೆ ವೇಳೆ ವಿದ್ಯಾರ್ಥಿಗಳು ನಕಲು ಮಾಡುತ್ತಿರುವುದು ಹಾಗೂ ನಕಲು ಮಾಡುತ್ತಿರುವುದು ಗೊತ್ತಿದ್ದರೂ ಕೊಠಡಿ ಮೇಲ್ವಿಚಾರಕರಾಗಿದ್ದ ಏವೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಸಾಹೇಬಗೌಡ ಉಕ್ಕಾಲಿ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ಕರ್ತವ್ಯಲೋಪ ಆರೋಪದಲ್ಲಿ ಯಾದಗಿರಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ಹೆಚ್.ಟಿ. ಶಿಕ್ಷಕ ಸಾಹೇಬಗೌಡ ಉಕ್ಕಾಲಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇಲಾಖೆ ವಿಚಾರಣೆ ಕಾಯ್ದಿರಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ