Latest

ಎಸ್.ಎಸ್.ಎಲ್.ಸಿ ಪರೀಕ್ಷೆ: ಶಿಕ್ಷಕರಿಗೆ ಲಸಿಕೆ ಅಭಿಯಾನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಎಸ್.ಎಸ್.ಎಲ್.ಸಿ ಪರೀಕ್ಷಾ ಕಾರ್ಯದಲ್ಲಿ ತೊಡಗುವ ಶಿಕ್ಷಕರಿಗೆ ಹಾಗೂ ಅಧಿಕಾರಿಗಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು.

ನಿಪ್ಪಾಣಿಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷಾ ಕಾರ್ಯದಲ್ಲಿ ತೊಡಗುವ ಶಿಕ್ಷಕರು ಹಾಗೂ ಅಧಿಕಾರಿಗಳಿಗೆ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ, ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ಇದೇ ತಿಂಗಳ 19 ಹಾಗೂ 22ನೇ ತಾರೀಕಿನಂದು ಎಸ್.ಎಸ್.ಎಲ್ ಪರೀಕ್ಷೆ ಇರುವ ನಿಮಿತ್ತವಾಗಿ, ಅಧಿಕಾರಿಗಳು, ಶಿಕ್ಷಕರು ಮತ್ತು ಇತರೆ ಸಿಬ್ಬಂದಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಮೂರನೇ ಅಲೆ ಮಕ್ಕಳ ಮೇಲೆ ಪ್ರಭಾವ ಬಿರಲಿದೆ ಎಂಬ ತಜ್ಞರ ಸಲಯ ಮೇರೆಗೆ ಜಿಲ್ಲಾ ಆಡಳಿತ ಹಾಗೂ ತಾಲ್ಲೂಕಾಡಳಿತ ಸಜ್ಜಾಗಿದೆ ಎಂದು ಹೇಳಿದರು.

ನಿಪ್ಪಾಣಿ ತಾಲ್ಲೂಕಿಗೆ ಪ್ರತಿದಿನ 10,000 ಲಸಿಕೆ ಬೇಕು ಈಗಾಗಲೇ ಆರೋಗ್ಯ ಸಚಿವರಾದ ಡಾ.ಕೆ. ಸುಧಾಕರ್ ಅವರಿಗೆ ಮನವಿ ಮಾಡಿದ್ದೇನೆ. ಸರ್ವರೂ ತಪ್ಪದೇ ಲಸಿಕೆ ಹಾಕಿಸಿಕೊಳ್ಳಿ, ಸುರಕ್ಷಿತವಾಗಿರಿ ಎಂದು ಹೇಳಿದರು.

ಬಿ.ಇ.ಓ ರೇವತಿ ಮಠದ ಮಾತನಾಡಿ ತಾಲೂಕಿನಲ್ಲಿರುವ ಶಿಕ್ಷಕರು ಕೋಗನೊಳಿ ಚೇಕ ಪೋಸ್ಟಿನಲ್ಲಿ ಸೇವೆ ಸಲ್ಲಿಸುವ ಜೋತೆಗೆ ಕೋರೊನಾ ಹೋಗಲಾಡಿಸಲು ಮಾಡಿದ ಕಾರ್ಯ ಶ್ಲಾಘನಿಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಗಡಾದ, ತಾಲೂಕು ವೈದ್ಯಾಧಿಕಾರಿ ಡಾ. ವಿಠ್ಠಲ ಶಿಂಧೆ, ಮುಖ್ಯ ವೈದ್ಯಾಧಿಕಾರಿ ಡಾ. ಸೀಮಾ ಗುಂಜ್ಯಾಳೆ, ಬಿಇಓ ರೇವತಿ ಮಠದ, ನಗರಸಭೆ ಅಧ್ಯಕ್ಷರಾದ ಜಯವಂತ ಭಾಟಲೆ, ಉಪಾಧ್ಯಕ್ಷರಾದ ನೀತಾ ಬಾಗಡಿ, ಸದಸ್ಯರಾದ ರಾಜು ಗುಂಡೆಶಾ, ಸಂತೋಷ ಸಾಂಗಾವಕರಾ, ಆಶಾ ಟವಳೆ, ಉಪಾಸನಾ ಗಾರವೆ, ದೀಪಾಲಿ ಗಿರಿ, ದತ್ತಾ ಜೊತ್ರೆ ಸ್ಥಳೀಯ ಮುಖಂಡರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಗುರುವಾರ ಕೇಂದ್ರ ಸಚಿವ ಸಂಪುಟ ಪುನಾರಚನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button