ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಸುಮಾರು 6 ಲಕ್ಷ ಮಕ್ಕಳು ಬರೆಯಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಈ ವರ್ಷದ ಮಟ್ಟಗೆ ನಡೆಸದಂತೆ ಸರಕಾರದ ಮೇಲೆ ತೀವ್ರ ಒತ್ತಡ ಕೇಳಿಬರುತ್ತಿದೆ.
ಸೋಮವಾರ ಬೆಂಗಳೂರಿನಲ್ಲಿ ಹತ್ತಾರು ಸಂಘಟನೆಗಳು ಹಾಗೂ ಹಲವಾರು ಗಣ್ಯರು, ಪ್ರಸಕ್ತ ಪರಿಸ್ಥಿತಿಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆವುದು ಬೇಡ ಎಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ತೀವ್ರಗತಿಯಲ್ಲಿ ಹರಡುತ್ತಿದೆ. ಈಗ ಮಕ್ಕಳು ಒಂದೇ ಕಡೆ ಬೆರೆಯಲು ಅವಕಾಶ ನೀಡುವುದು ಅಪಾಯಕಾರಿಯಾಗಿದೆ. ಜೊತೆಗೆ ಲಕ್ಷಾಂತರ ಪಾಲಕರು ಕೂಡ ಮಕ್ಕಳನ್ನು ಪರೀಕ್ಷಾ ಕೊಠಡಿಗೆ ಕಳುಹಿಸಲು ಬರುತ್ತಾರೆ. ಜೊತೆಗೆ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಹಂಚುವವರು ದೂರದಿಂದ ಎಸೆಯಲು ಸಾಧ್ಯವಿಲ್ಲ.
ಈ ಎಲ್ಲ ಹಿನ್ನೆಲೆಯಲ್ಲಿ ಸರಕಾರ ಈ ಬಾರಿ ಪರೀಕ್ಷೆ ಕೈ ಬಿಡಬೇಕು. ಮುಂದಿನ ವರ್ಷ ಸ್ಕ್ರೀನಿಂಗ್ ಟೆಸ್ಟ್ ನಡೆಸುವ ಮೂಲಕ ಪಿಯುಸಿಗೆ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ