Latest

ಎಸ್ ಎಸ್ ಎಲ್ ಸಿ ಪರೀಕ್ಷೆ: ಮಧ್ಯ ಪ್ರವೇಶಕ್ಕೆ ಸುಪ್ರಿಂ ನಕಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಎಸ್ಎಸ್ಎಲ್ ಸಿ ಪರೀಕ್ಷೆಗೆ ತಡೆ ನೀಡಲು ಸರ್ವೋಚ್ಛ ನ್ಯಾಯಾಲಯ ನಿರಾಕರಿಸಿದೆ. ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಕೋರ್ಟ್ ತಿಳಿಸಿದೆ.

ಬೆಳಗಾವಿಯ ಮರಾಠಾ ಮಂಡಳ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಹಲಗೇಕರ್, ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದು ಸರಿಯಲ್ಲ. ಇದಕ್ಕೆ ತಡೆ ನೀಡಬೇಕು ಎಂದು ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಆದರೆ, ಈ ವಿಷಯದಲ್ಲಿ ಮಧ್ಯ ಪ್ರವೇಶಿಸಿಲು ನಿರಾಕರಿಸಿರುವ ನ್ಯಾಯಾಲಯ, ಎಲ್ಲ ರೀತಿಯ ಮುಂಜಾಗ್ರತೆ ಕ್ರಮ ತೆಗೆದುಕೊಂಡು ಪರೀಕ್ಷೆ ನಡೆಸುವಂತೆ ಸರಕಾರಕ್ಕೆ ನಿರ್ದೇಶನ ನೀಡಿದೆ.

ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದು, ಈ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಮತ್ತು ಪಾಲಕರಿಗೆ ದೊಡ್ಡ ಅಪಾಯವಾಗಬಹುದು. ಪರೀಕ್ಷೆ ನಡೆಸದೆ ಇರುವುದರಿಂದ ಅಂತಹ ದೊಡ್ಡ ಸಮಸ್ಯೆ ಏನೂ ಆಗುವುದಿಲ್ಲ ಎಂದು ಹಲಗೇಕರ್ ಪರವಾಗಿ ವಾದಿಸಲಾಗಿತ್ತು.

ಈಗ ಪರೀಕ್ಷೆ ಸರಕಾರ ನಿಗದಿಪಡಿಸಿರುವಂತೆ ಜೂನ್ 25ರಿಂದ ನಡೆಯಲಿದೆ.

ಎಸ್ಎಸ್ಎಲ್ ಸಿ ಪರೀಕ್ಷೆ ರದ್ದುಪಡಿಸಲು ಕೋರಿ ಸುಪ್ರಿಂ ಮೆಟ್ಟಿಲೇರಿರುವ ರಾಜಶ್ರೀ ಹಲಗೇಕರ್ ಸಂದರ್ಶನ

ಸುಪ್ರಿಂ ಕೋರ್ಟ್ ತೀರ್ಪಿನಿಂದ ನನಗೇನೂ ನಷ್ಟವಿಲ್ಲ. ಆದರೆ ಸಾರ್ವಜನಿಕರ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾನು ನ್ಯಾಯಾಲಯಕ್ಕೆ ಹೋಗಿದ್ದೆ. ಪರೀಕ್ಷೆ ಸುಗಮವಾಗಿ ನಡೆಯಲಿ, ಯಾರಿಗೂ ಅಪಾಯವಾಗದಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

-ರಾಜಶ್ರೀ ಹಲಗೇಕರ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button