ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಎರಡನೇ ಅಲೆ ನಡುವೆಯೇ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಮುಹೂರ್ತ ನಿಗದಿಯಾಗಿದ್ದು, ಜುಲೈ 19 ಹಾಗೂ ಜುಲೈ 22ರಂದು ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ಈ ಬಾರಿ ಎರಡು ದಿನ ಪರೀಕ್ಷೆ ನಡೆಯಲಿದ್ದು, ಮಕ್ಕಳ ಆತ್ಮಸ್ಥೈರ ಹೆಚ್ಚಿಸುವ ನಿಟ್ಟಿನಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಎಲ್ಲಾ ರೀತಿಯ ಮುಂಜಾಗೃತಾ ಕ್ರಮಕೈಗೊಂಡೂ ಪರೀಕ್ಷೆ ನಡೆಸಲಾಗುವುದು ಎಂದರು.
ಜುಲೈ 19ರಂದು ಕೋರ್ ವಿಷಯಗಳ ಪರೀಕ್ಷೆ ನಡೆಯಲಿದ್ದು, ಬೆಳಿಗ್ಗೆ 10:30ರಿಂದ 2:30ರವರೆಗೆ ಸಮಯ ನಿಗದಿ ಮಾಡಲಾಗಿದೆ. ಜುಲೈ 22ರಂದು ಭಾಷಾ ವಿಷಯಗಳ ಪರೀಕ್ಷೆ ಬೆಳಿಗ್ಗೆ 10:30ರಿಂದ 2:30ರವರೆಗೆ ನಡೆಯಲಿದೆ ಎಂದು ಹೇಳಿದರು. ಈ ಬಾರಿ ಪರೀಕ್ಷೆಗೆ 8,76,581 ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. 73,066 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು. ಜೂನ್ 30ರಂದು ಹಾಲ್ ಟಿಕೆಟ್ ಬಿಡುಗಡೆ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು 8:30ಕ್ಕೆ ಹಾಜರಾಗಿರಬೇಕು ಎಂದು ವಿವರಿಸಿದರು.
ಸಮಗ್ರ ವಿವರ ಇಲ್ಲಿದೆ – SSLC2021revisedtimetableKannada
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ