Latest

ಎಸ್.ಎಸ್.ಎಲ್.ಸಿ ಪರೀಕ್ಷಾ ದಿನಾಂಕ ಪ್ರಕಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಂಡಿದ್ದು, ಜೂನ್ 14ರಿಂದ 25ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈ ಬಾರಿ ಪರೀಕ್ಷಾ ಅವಧಿ 3 ಗಂಟೆ 15 ನಿಮಿಷಗಳ ಕಾಲ ಇರಲಿದ್ದು, ಜೂನ್ 14ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದೆ.

ಜೂನ್ 14ರಂದು ಪ್ರಥಮ ಭಾಷೆ
ಜೂನ್ 16ರಂದು ಗಣಿತ, ಸಮಾಜಶಾಸ್ತ್ರ
ಜೂನ್ 18ರಂದು ದ್ವಿತೀಯ ಭಾಷೆ ಇಂಗ್ಲೀಷ್ ಅಥವಾ ಕನ್ನಡ
ಜೂನ್ 21ರಂದು ವಿಜ್ಞಾನ
ಜೂನ್ 23ರಂದು ತೃತೀಯ ಭಾಷೆ
ಜೂನ್ 25ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ಫೆಬ್ರವರಿ 1ರಿಂದ 9ನೇ ತರಗತಿ, 10ನೇ ತರಗತಿ ಹಾಗೂ 11, 12ನೇ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ. 1-5ನೇ ತರಗತಿ ಆರಂಭಿಸುವ ಬಗ್ಗೆ ಫೆಬ್ರವರಿ 2ನೇ ವಾರದಿಂದ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನು ಖಾಸಗಿ ಶಾಲೆಗಳ ಶುಲ್ಕ ನಿಗದಿ ಬಗ್ಗೆ ಇಂದಿನ ಸಭೆಯಲ್ಲಿ ನಿರ್ಧಾರವಾಗಿಲ್ಲ. ಶುಲ್ಕ ನಿಗದಿ ಬಗ್ಗೆ ಪ್ರತ್ಯೇಕ ಸಲಹಾ ಸಮಿತಿ ಜೊತೆ ಚರ್ಚಿಸಬೇಕಿದೆ. ಆ ಬಳಿಕ ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button