Kannada NewsKarnataka NewsLatest

*ಮುಗಳಿಹಾಳ ಮತ್ತು ಖಾನಾಪುರದಲ್ಲಿ ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹೊಸ ಪರೀಕ್ಷಾ ಕೇಂದ್ರ*

ಪ್ರಗತಿವಾಹಿನಿ ಸುದ್ದಿ; ಖಾನಾಪುರ: ತಾಲೂಕಿನಲ್ಲಿ ಶುಕ್ರವಾರದಿಂದ ಆರಂಭಗೊಳ್ಳುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವಸಿದ್ಧತೆಗಳು ಈಗಾಗಲೇ ಪೂರ್ಣಗೊಂಡಿವೆ. ಈ ಬಾರಿ 1908 ವಿದ್ಯಾರ್ಥಿಗಳು, 1798 ವಿದ್ಯಾರ್ಥಿನಿಯರು ಸೇರಿ ಒಟ್ಟು 3706 ಮಕ್ಕಳು ಪರೀಕ್ಷೆಯನ್ನು ಎದುರಿಸಲಿದ್ದಾರೆ.

ಮುಗಳಿಹಾಳ ಮತ್ತು ಖಾನಾಪುರ ಪಟ್ಟಣದ ಸಕರ್ಾರಿ ಪ್ರೌಢಶಾಲೆಗಳಲ್ಲಿ ಮೊದಲ ಸಲ ಹೊಸ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಶ್ವರಿ ಕುಡಚಿ ಮಾಹಿತಿ ನೀಡಿದರು.

ಪಟ್ಟಣದ ಬಿಇಒ ಕಚೇರಿಯಲ್ಲಿ ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಪರೀಕ್ಷೆಗಾಗಿ ಶಿಕ್ಷಣ ಇಲಾಖೆಯಿಂದ ಪಟ್ಟಣದಲ್ಲಿ 4, ಜಾಂಬೋಟಿ, ಗರ್ಲಗುಂಜಿ,
ಪಾರಿಶ್ವಾಡ, ನಂದಗಡ, ಇಟಗಿ, ಹಲಸಿ, ಮುಗಳಿಹಾಳ, ಲೋಂಡಾ, ಗಂದಿಗವಾಡ, ಚಿಕದಿನಕೊಪ್ಪ, ಲಿಂಗನಮಠ ಮತ್ತು ಗುಂಜಿ ಗ್ರಾಮಗಳ ಪ್ರೌಢಶಾಲೆಗಳಲ್ಲಿ ತಲಾ ಒಂದು ಸೇರಿದಂತೆ ಒಟ್ಟು 16 ಪರೀಕ್ಷಾ ಕೇಂದ್ರಗಳ 154 ಪರೀಕ್ಷಾ ಕೊಠಡಿಗಳಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದೆ.

ಒಟ್ಟು 224 ಮೇಲ್ಚಿಚಾರಕರನ್ನು ಪರೀಕ್ಷಾ ಕೊಠಡಿಗಳ ಮೇಲ್ಚಿಚಾರಣೆಗಾಗಿ ಮತ್ತು 16 ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಸೂಚನೆಯಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪರೀಕ್ಷೆಗಳಲ್ಲಿ ನಕಲು ತಡೆಗಟ್ಟಲು ಮೂರು ಪರಿವೀಕ್ಷಣಾ ತಂಡಗಳು ಕಾರ್ಯನಿರ್ವಹಿಸಲಿವೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಮತ್ತು ಅಂಗನವಾಡಿ
ಸಹಾಯಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಅಪ್ಪಣ್ಣ ಅಂಬಗಿ, ಪ್ರಕಾಶ ಹೊಸಮನಿ, ಸುನೀಲ ಚಿಗುಳಕರ, ಶಂಕರ ಕಮ್ಮಾರ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.
SSLC Exam,khanapura,mugalihala

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button