ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಳೆ ಮಾರ್ಚ್ 31ರಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪರೀಕ್ಷೆ ಕೇಂದ್ರದ 200 ಮಿಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಾಳೆಯಿಂದ ಏಪ್ರಿಲ್ 15ರವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್ ಫೋನ್ ನಂತಹ ಸಾಧನಗಳನ್ನು ಪರೀಕ್ಷಾ ಕೊಠಡಿಗೆ ತರುವಂತಿಲ್ಲ. ಪರೀಕ್ಷಾ ಕೇಂದ್ರದ ಬಳಿಯಿರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಗಳನು ಮುಚ್ಚುವಂತೆ ಆದೇಶಿಸಲಾಗಿದೆ.
ವಿದ್ಯಾರ್ಥಿಗಳು, ಪೋಷಕರಿಗೆ ಆತಂಕ, ಗೊಂದಲಗಳಿದ್ದರೆ ಪರಿಹರಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆವತಿಯಿಂದ ಸಹಾಯವಾಣಿ ಆರಂಭಿಸಲಾಗಿದ್ದು, 080-23310075/76ಕ್ಕೆ ಸಂಪರ್ಕಿಸಬಹುದಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ