EducationKarnataka NewsLatest

*ಎಸ್‌ಎಸ್‌ಎಲ್‌ಸಿ ಹಿಂದಿ ವಿಷಯಕ್ಕೆ ಗ್ರೇಡ್ ವಿಚಾರ: ಹೈಕೋರ್ಟ್ ಮಹತ್ವದ ಆದೇಶ*

ಸರ್ಕಾರದ ನಿರ್ಧಾರಕ್ಕೆ ಹಿನ್ನಡೆ

ಪ್ರಗತಿವಾಹಿನಿ ಸುದ್ದಿ: ಎಸ್‌ಎಸ್‌ಎಲ್‌ಸಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲಿಗೆ ಅಂಕ ನೀಡುವಂತೆ ಆದೇಶದ ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್​​ ಇತ್ಯರ್ಥಪಡಿಸಿದೆ.

2025-26ರಿಂದ ಹಿಂದಿ ವಿಷಯಕ್ಕೆ ಗ್ರೇಡ್ ನೀಡುವುದು ಬೇಡ ಅಂಕ ನೀಡಬೇಕೆಂದು ನ್ಯಾ.ಇ.ಎಸ್.ಇಂದಿರೇಶ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದು, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಜಾಗೊಂಡಿದೆ.

SSLC ಪರೀಕ್ಷೆ ಅಧಿಸೂಚನೆ ಹೊರಡಿಸಿದಾಗಲೇ ಇದನ್ನು ಸ್ಪಷ್ಟಪಡಿಸಬೇಕಿತ್ತು. ಅಧಿಸೂಚನೆಯಲ್ಲಿಲ್ಲದ ಗ್ರೇಡ್ ಪದ್ಧತಿಯನ್ನ ಈಗ ಅನುಷ್ಠಾನಗೊಳಿಸುತ್ತಿದ್ದೀರಿ? ಪಿಯುಸಿಯಲ್ಲಿ ಈಗ ಶೇ.83ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ. ನೀವು ಎಲ್ಲರನ್ನೂ ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ. ನಿಯಮ ರೂಪಿಸಿದ ಬಳಿಕ ಸರ್ಕಾರ ಸೂಕ್ತವೆನಿಸಿದ ಕ್ರಮ ಕೈಗೊಳ್ಳಬಹುದು. ಆದರೆ ನಿಯಮ ರೂಪಿಸುವ ಮುಂಚಿನ ಪರೀಕ್ಷೆಯ ಅಂಕ ಪದ್ಧತಿ ಬದಲಾವಣೆ ಸೂಕ್ತವಲ್ಲ ಎಂದು ತಿಳಿಸಿದೆ. ಜೊತೆಗೆ 2025-26ನೇ ಸಾಲಿನ ಎಸ್​​ಎಸ್​​ಎಲ್​​ಸಿ ಹಿಂದಿ ಭಾಷೆಗೆ ಅಂಕ ನೀಡುವಂತೆ ಹೈಕೋರ್ಟ್ ಆದೇಶಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button