Education

*SSLC ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಮುಖ್ಯ ಪರೀಕ್ಷೆಯಂತೆ ಮಧ್ಯವಾರ್ಷಿಕ ಪರೀಕ್ಷೆ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸ್ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಶಾಕ್ ನೀಡಿದೆ. ಮುಖ್ಯ ಪರೀಕ್ಷೆಯಂತೆಯೇ ಮಧ್ಯವಾರ್ಷಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ.

ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್ ಸಿ ಮಧ್ಯವಾರ್ಷಿಕ ಪರೀಕ್ಷೆಗೆ ಪ್ರಶ್ನೆ ಪತ್ರಿಕೆಗಳನ್ನು ರೂಪಿಸಿ ನೀಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ.

ಈ ಹಿಂದೆ ಪೂರ್ವ ಸಿದ್ಧತಾ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಮಾತ್ರ ಪ್ರಶ್ನೆ ಪತ್ರಿಕೆ ರೂಪಿಸಿ ಕೊಡಲಾಗುತ್ತಿತ್ತು. ಆದರೆ ಈ ವರ್ಷದಿಂದ ಮಧ್ಯವಾರ್ಷಿಕ ಪರೀಕ್ಷೆಗೂ ಪ್ರಶ್ನೆ ಪತ್ರಿಕೆ ರೂಪಿಸಿ ಆನ್ ಲೈನ್ ಮೂಲಕ ರವಾನಿಸುವ ಮಹತ್ವದ ನಿರ್ಧರ ಮಾಡಿದೆ.

ಮಧ್ಯವಾರ್ಷಿಕ ಪರೀಕ್ಷೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ಇಲಾಖೆ ಈ ನಿರ್ಧಾರ ಕೈಗೊಂಡಿರುವುದು ಹಲವರ ವಿರೋಧಕ್ಕೂ ಕಾರಣವಗಿದೆ.

ಪ್ರಶ್ನೆ ಪತ್ರಿಕೆ ಮುದ್ರಣಕ್ಕೆ ಯಾವುದೇ ಅನುದಾನವನ್ನೂ ಶಾಲೆಗಳಿಗೆ ಬಿಡುಗಡೆ ಮಾಡಲಾಗಿಲ್ಲ. ಶಿಕ್ಷಕರು ಹಾಗೂ ಶಾಲೆಗಳ ಹೆಗಲಿಗೆ ಖರ್ಚು ಹಾಕಿ ಇಲಾಖೆ ಸುಮ್ಮನಾಗಿದೆ. ಇದರಿಂದಾಗಿ ಶಿಕ್ಷಕರು ದಾನಿಗಳ ಮೊರೆ ಹೋಗಬೇಕಾದ ಸ್ಥಿತಿ ಸರ್ಕಾರಿ ಶಾಲೆ ಶಿಕ್ಷಕರಿಗೆ ಬಂದಿದೆ. ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆಗಳಿಗೆ ಅನುದಾನ ಬಿಡುಗದೇ ಮಾಡದೇ ಏಕಾಏಕಿ ಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

ವಿದ್ಯಾರ್ಥಿ ಸ್ನೇಹಿ ಪರೀಕ್ಷೆ ನಡೆಸಬೇಕಿದ್ದ ಶಿಕ್ಷಣ ಇಲಾಖೆ ಬೋರ್ಡ್ ಇಂತದ್ದೊಂದು ನಿರ್ಧರಾ ಕೈಗೊಂಡಿರುವುದು ಎಲ್ಲೆಡೆ ವಿರೋಧ ವ್ಯಕ್ತವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button