ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡೆಯುತ್ತಿದ್ದು, ಎರಡನೇ ಮಾದರಿ ಪ್ರಶ್ನೆ ಪರೀಕ್ಷೆ ಬಿಡುಗಡೆಯಾಗಿದೆ.
ಎರಡು ದಿನಗಳ ಹಿಂದೆ ಮೊದಲ ಪ್ರಶ್ನೆ ಪ್ರತ್ರಿಕೆ ಪ್ರಕಟಗೊಂಡಿತ್ತು. ಇದೀಗ ಎಲ್ಲಾ ಭಾಷಾ ವಿಷಯಗಳ ಪ್ರಶ್ನೆ ಪತ್ರಿಕೆ ಶಿಕ್ಷಣ ಇಲಾಖೆ ವೆಬ್ ಸೈಟ್ ನಲ್ಲಿ ಬಿಡುಗಡೆಗೊಂಡಿದೆ.
ಪ್ರಥಮ ಭಾಷೆ ಕನ್ನಡ, ಉರ್ದು, ಇಂಗ್ಲೀಷ್, ಸಂಸ್ಕೃತ ಸೇರಿದಂತೆ ಭಾಷಾ ವಿಷಯಗಳ ಎರಡನೇ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆಯಾಗಿದ್ದು, ವಿದ್ಯಾರ್ಥಿಗಳು ಓಎಂಆರ್ ಶೀಟ್ ನಲ್ಲಿಯೂ ಉತ್ತರ ನಮೂದಿಸಬಹುದು. ಜುಲೈ ಕೊನೇ ವಾರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುವುದು ಬಹುತೇಕ ಖಚಿತವಾಗಿದೆ.
ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಗಾಗಿ ಇಲಾಖೆ ವೆಬ್ ಸೈಟ್ www.sslc.karnataka.gov.in ನ್ನು ಕ್ಲಿಕ್ ಮಾಡಿ
ದ್ವಿತೀಯ ಪಿಯು ಫಲಿತಾಂಶದಲ್ಲಿ ಮತ್ತೆ ಬದಲಾವಣೆ…!
ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಹಣ ಪಡೆದಿದ್ದು, ಸಿದ್ದರಾಮಯ್ಯ ಹೊರತು ನಾವಲ್ಲ -ಹೆಚ್ ಡಿಕೆ ಬಾಂಬ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ