ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸೋಮವಾರ ಮಧ್ಯಾಹ್ನ 3 ಗಂಟೆಗೆ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಆಗಸ್ಟ್ 10ರಂದು ಪರಿಕ್ಷಾ ಫಲಿತಾಂಶ ಪ್ರಕಟವಾಗಲಿದ್ದು, ಒಮ್ಮೆ ಫಲಿತಾಂಶ ಪ್ರಕಟವಾದ ನಂತರ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟವಾಗಲಿದೆ.
ಕೊರೊನಾ ಭೀತಿ ನಡುವೆಯೂ ರಾಜ್ಯದಲ್ಲಿ ಈ ವರ್ಷ ಸುಮಾರು 8.40 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ. ಜುಲೈ 3 ರಂದು ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದಿತ್ತು. ಈಗಾಗಲೇ ಮೌಲ್ಯಮಾಪನ ಮುಕ್ತಾಯವಾಗಿದೆ. ಹೀಗಾಗಿ, ಈ ವಾರದಲ್ಲೇ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿತ್ತು. ಆದರೆ, ಸಚಿವ ಎಸ್. ಸುರೇಶ್ ಕುಮಾರ್ ಇಂದು ಫೇಸ್ಬುಕ್ನಲ್ಲಿ ಮಾಹಿತಿ ನೀಡಿದ್ದು, ಸೋಮವಾರ ಮಧ್ಯಾಹ್ನ 3 ಗಂಟೆಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ