Latest

SSLC ಪರೀಕ್ಷಾ ಫಲಿತಾಂಶ: ದಿನಾಂಕ ಪ್ರಕಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಮೇ 19ರಂದು ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಶಿಕ್ಷಣ ಸಚಿವರು ಎಸ್.ಎಸ್.ಎಲ್.ಸಿ ಫಲಿತಾಂಶ 19ರಂದು ಪ್ರಕಟಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಫಲಿತಾಂಶವನ್ನು https://sslc.karnataka.gov.in ಅಥವಾ https:karresults.nic.in ವೆಬ್ ಸೈಟ್ ನಲ್ಲಿ ನೋಡಬಹುದು.

ಈ ಹಿಂದೆ ಮೇ 15ರಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ತಿಳಿಸಿತ್ತು. ಆದರೆ ರಜೆಗಳು ಸಾಲು ಸಾಲಾಗಿ ಬಂದಿರುವ ಹಿನ್ನೆಲೆಯಲ್ಲಿ ಫಲಿತಾಂಶ ಘೋಷಣೆ ತಡವಾಗಿದೆ ಎನ್ನಲಾಗಿದೆ.
ಡಿವೈಎಸ್ ಪಿ ಬಂಧನಕ್ಕೆ ಸಿಐಡಿ ಹಿಂದೇಟು; ಶಾಂತಕುಮಾರ್ ಬಂಧನವಾಗಿಲ್ಲ ಯಾಕೆ?; ಸ್ಪಷ್ಟನೆ ನೀಡಿದ ಗೃಹ ಸಚಿವರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button