ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಜೂನ್ 28 ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಸಲಾಗುತ್ತದೆ. ಹೈಕೋರ್ಟ್‌ಗೂ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ಇತ್ಯರ್ಥ ಮಾಡಿ, ಪರೀಕ್ಷೆಗೆ ಕೆಲವು ನಿಯಮಗಳನ್ನು ನೀಡಿದೆ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಅಂತರ ಇರಬೇಕು, ಮೂರೂವರೆ ಅಡಿ. ಒಂದು ಪರೀಕ್ಷೆ ಹಾಲ್‌ನಲ್ಲಿ 18 ಜನರಿಂದ 20 ವಿದ್ಯಾರ್ಥಿಗಳನ್ನು ಕೂಡಿಸಲಾಗುವುದು. ಮಾಸ್ಕ್ ಕಡ್ಡಾಯವಾಗಿದ್ದು, 8,48,203 ಮಕ್ಕಳು ಪರೀಕ್ಷೆ ಬರೆಯುತ್ತಾರೆ. ಪ್ರತಿ ಮಕ್ಕಳಿಗೂ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಕಡ್ಡಾಯ. ತಪಾಸಣೆಯಲ್ಲಿ ಅನಾರೋಗ್ಯ ಕಂಡುಬಂದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲು ವ್ಯವಸ್ಥೆ ಮಾಡಲಾಗುವುದು ಎಂದರು.
ಪರೀಕ್ಷೆ ಕೇಂದ್ರದ ಸೂಪರ್ ವೈಸರ್ ಗಳು ಕೂಡ ಈ ಎಲ್ಲಾ ಕ್ರಮಗಳಿಗೆ ಒಳಪಡಬೇಕು. ಮಕ್ಕಳು ಕಾದಾರಿದ ನೀರು ಮನೆಯಿಂದ ತರಬೇಕು. ಪರೀಕ್ಷಾ ಕೇಂದ್ರಕ್ಕೆ ಮಕ್ಕಳು ಬರಲು ಒಂದು ಸರ್ವೇ ಮಾಡಲಾಗಿದ್ದು, ಉಚಿತವಾಗಿ ಬಸ್ ವ್ಯವಸ್ಥೆ ಮಾಡಲಾಗುತ್ತದೆ. ರೂಟ್ ಕೂಡ ಫೀಕ್ಸ್ ಮಾಡಲಾಗುತ್ತದೆ ಎಂದು ಹೇಳಿದರು.
ಜುಲೈ 4ರಂದು ಪರೀಕ್ಷೆ ಮುಗಿಯಲಿದ್ದು, ಜುಲೈ ಕೊನೆವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಇನ್ನು ಪೂರಕ ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ವಿವರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ