EducationKannada NewsKarnataka NewsLatest

*ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಕೆ.ಎಸ್.ಆರ್.ಟಿ.ಸಿ*

ಪ್ರಗತಿವಾಹಿನಿ ಸುದ್ದಿ: 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಇದೇ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ವಿದ್ಯಾಅರ್ಥಿಗಳ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿ ಗುಡ್ ನ್ಯೂಸ್ ನೀಡಿದೆ.

ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆ.ಎಸ್.​​ಆರ್.​​ಟಿ.ಸಿ ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಪ್ರಯಾಣ ಘೋಷಿಸಿದೆ.

ಪರೀಕ್ಷಾ ದಿನಗಳಲ್ಲಿ ಎಸ್​​ಎಸ್​​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ತೋರಿಸಿ, ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ ಕೆ.ಎಸ್​.ಆರ್.​​ಟಿ.ಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಬಸ್ ಕಂಡೆಕ್ಟರ್​ಗೆ ಹಾಲ್ ಟಿಕೆಟ್ ತೋರಿಸಿದರೆ ಉಚಿತವಾಗಿ ಪ್ರಯಾಣಿಸುವ ಅವಕಾಶ ಸಿಗಲಿದೆ.

Home add -Advt


Related Articles

Back to top button