Latest

ಕಟ್ಟುನಿಟ್ಟಿನ ಕ್ರಮ: ಸಚಿವ ಸುರೇಶ್ ಕುಮಾರ್ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿರೋ ಮಕ್ಕಳ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಸುರಕ್ಷತೆ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲು ನಾನು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದೇನೆ ಇದು ಪರೀಕ್ಷಾ ಕೇಂದ್ರ ಆಗಬಾರದು ಮಕ್ಕಳಿಗೆ ಸುರಕ್ಷಾ ಕೇಂದ್ರ ಆಗಿರಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಅಗಲಗುರ್ಕಿ ಗ್ರಾಮದ ಬಿಜಿಎಸ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ನಂತರ ಮಾತನಾಡಿದ ಸುರೇಶ್ ಕುಮಾರ್, ಇಂಗ್ಲೀಷ್ ಹಾಗೂ ಗಣಿತ ಪರೀಕ್ಷೆ ದಿನ ಸರಾಸರಿ ಶೇ.98 ರಷ್ಟು ಮಂದಿ ಪರೀಕ್ಷೆ ಬರೆದಿದ್ದಾರೆ. ಕಳೆದ ವರ್ಷ ಇದು 98.68 ಆಗಿತ್ತು. ಹೀಗಾಗಿ ಇದು ಸಹ ಉತ್ತಮ ನಡೆ. ಶಾಲೆಗೆ ಬಂದು ವ್ಯಾಸಂಗ ಮಾಡಿರೋ ಮಕ್ಕಳು ಗೈರಾಗುತ್ತಿಲ್ಲ. ಕೆಲ ಮಕ್ಕಳು ಗೈರಾಗಿದ್ದಕ್ಕೆ ಸ್ವತಃ ನಮ್ಮ ಅಧಿಕಾರಿಗಳು ಪೋಷಕರನ್ನ ಸಂಪರ್ಕಿಸಿ ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಹೀಗಾಗಿ ಅಂತಹ ಮಕ್ಕಳು ಮತ್ತೆ ಬಂದು ಪರೀಕ್ಷೆ ಎದುರಿಸಿದ್ದಾರೆ ಎಂದರು.

ಈ ವರ್ಷ ಕೊರೊನಾ ಇರುವುದರಿಂದ ಯಾವುದೇ ಖಾಸಗಿ ಶಾಲೆ ಶುಲ್ಕ ಹೆಚ್ಚಳ ಮಾಡುವಂತಿಲ್ಲ ಎಂದು ಸುರೇಶ್ ಕುಮಾರ್ ಹೇಳಿದರು. ಈ ಒಂದು ವರ್ಷ ವಿಶೇಷವಾದ ವರ್ಷ ಕೊರೊನಾದಿಂದ ಎಲ್ಲರೂ ಸಮಸ್ಯೆಗಳಿಗೆ ಸಿಲುಕಿದ್ದು, ಮಾನವೀಯತೆ ದೃಷ್ಠಿಯಿಂದಲೂ ಸಹ ಯಾರೂ ಶುಲ್ಕ ಹೆಚ್ಚಳ ಮಾಡಬಾರದು. ಯಾವುದೇ ಶಾಲೆ ಶುಲ್ಕ ಹೆಚ್ಚಳ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೀವಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button