
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜುಲೈ 19 ಹಾಗೂ 22ರಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ.
ಬನ್ನಿ ವಿದ್ಯಾರ್ಥಿಗಳೇ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಬರೆಯೋಣ ಎಂಬ ಶೀರ್ಷಿಕೆ ಅಡಿ ಸಂವಾದ ಕಾರ್ಯಕ್ರಮ ನಡೆಯಲಿದೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1:30ರವರೆಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.
ಸಂವಾದ ಕಾರ್ಯಕ್ರಮ ಇಂದು ಹಾಗೂ ನಾಳೆ ಎರಡು ದಿನ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯ ಹೋಗಲಾಡಿಸಿ ಧೈರ್ಯ ತುಂಬುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ