
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಿಬಿಎಸ್ ಸಿ 10ನೇ ತರಗತಿ ಪರೀಕ್ಷೆ ರದ್ದು ಮಾಡಿ ಆದೇಶ ಹೊರಡಿಸಿದ್ದರೆ, 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಕೂಡ ರದ್ದಾಗಲಿವೆಯೇ ಎಂಬುದು ಹಲವರ ಪ್ರಶ್ನೆ. ಇದಕ್ಕೆ ಸ್ವತ: ಶಿಕ್ಷಣ ಸಚಿವ ಸುರೇಶ ಕುಮಾರ್ ಉತ್ತರ ನೀಡಿದ್ದಾರೆ.
ಸಿಬಿಎಸ್ ಸಿ 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿರುವ ಬೆನ್ನಲ್ಲೇ ರಾಜ್ಯದ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಬಗ್ಗೆ ಊಹಾಪೋಹಗಳು ಏಳುತ್ತಿವೆ. ಆದರೆ ನಮ್ಮ ರಾಜ್ಯದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಪ್ರಾರಂಭವಾಗಬೇಕಿರುವುದು ಜೂನ್ 21ರಿಂದ. ಹಾಗಾಗಿ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಟ್ವೀಟರ್ ನಲ್ಲಿ ತಿಳಿಸಿದ್ದಾರೆ.
CBSE 10ನೇ ತರಗತಿ ಪರೀಕ್ಷೆಗಳು ರದ್ದು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ