
ಪ್ರಗತಿವಾಹಿನಿ ಸುದ್ದಿ : ರಾಜ್ಯಾದ್ಯಂತ ಈಗಾಗಲೇ ನಡೆಸಲಾಗಿರುವ 10ನೇ ತರಗತಿ ಫಲಿತಾಂಶವು ನಾಳೆ ಅಧಿಕೃತವಾಗಿ ಹೊರಬೀಳಲಿದೆ.
ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು ಅಧಿಕೃತ ಜಾಲತಾಣ https://karresults.nic.in
ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದು. ಮಧ್ಯಾಹ್ನ 12-30ಕ್ಕೆ ಫಲಿತಾಂಶ್ ಘೋಷಣೆಯಾಗಲಿದೆ ಎಂದಿದ್ದಾರೆ.
ಮಾರ್ಚ್-ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಪರೀಕ್ಷೆ-1ರ ಫಲಿತಾಂಶವು ಮೇ.2 ಪ್ರಕಟವಾಗಲಿದೆ. ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.