
ಪ್ರಗತಿವಾಹಿನಿ ಸುದ್ದಿ: ಗೊಂದಲಗಳ ನಡುವೆಯೂ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಕ್ಕೆ ಮುಹೂರ್ತ ನಿಗದಿಯಾಗಿದೆ.
ನಾಳೆ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಈ ಬಗ್ಗೆ ಸ್ವತಃ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಸಿದ್ದರಾಮಯ್ಯ ಜೊತೆಗಿನ ಸಭೆ ಬಳಿಕ ಘೋಷಣೆ ಮಾಡಿದ್ದಾರೆ.
ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಅಂಕದ ಬದಲಿಗೆ ಗ್ರೇಡ್ ನೀಡಲು ತೀರ್ಮಾನಿಸಲಾಗಿತ್ತು. ಆದ್ರೆ, ಇದೀಗ ಹೈಕೋರ್ಟ್ ಗ್ರೇಡ ಬದಲು ಅಂಕ ನೀಡುವಂತೆ ಆದೇಶಿಸಿದೆ. ಈ ಸಂಬಂಧ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಸಭೆಯಲ್ಲಿ ಹೈಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನಾಳೆ(ಏಪ್ರಿಲ್ 23) ಮಧ್ಯಾಹ್ನ 12 ಗಂಟೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನ್ಯಾಯಾಲಯದ ಆದೇಶ ಪಾಲಿಸಿ ಫಲಿತಾಂಶ ಪ್ರಕಟಿಸುತ್ತೇವೆ. ಫಲಿತಾಂಶ ಪ್ರಕಟಿಸುತ್ತಿರುವ ಬಗ್ಗೆ ಸಿಎಂ ಗಮನಕ್ಕೆ ತರಲಾಗಿದ್ದು, ಸಿಎಂ ಜೊತೆ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಹಾಜರಿದ್ದರು. ಈ ವರ್ಷ ಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ ಎಂದರು.

