ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ, 8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದರು. 8,07,206 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. 7,30,881 ಮಕ್ಕಳು ಪರೀಕ್ಷೆಯಲ್ಲಿ ಪಾಸಾಗಿದ್ದಾರೆ.
ಶೇ.81.30ರಷ್ಟು ವಿದ್ಯಾರ್ಥಿಗಳು, 90.29ರಷ್ಟು ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕಳೆದ 10 ವರ್ಷದಲ್ಲಿ ಈಬಾರಿ ಹೆಚ್ಚು ಫಲಿತಾಂಶ ಬಂದಿದೆ ಎಂದು ತಿಳಿಸಿದರು.
http://karresults.nic.in ಅಥವಾ http://kseeb.kar.nic.in ನಲ್ಲಿ ಫಲಿತಾಂಶ ಲಭ್ಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ