ಎಸ್.ಎಸ್.ಎಲ್.ಸಿ ಫಲಿತಾಂಶ; ಜೊಲ್ಲೆ ಎಜ್ಯುಕೇಶನ್ ಸೊಸಾಯಿಟಿಯ ಶಿವಶಂಕರ ಜೊಲ್ಲೆ ಕನ್ನಡ ಪ್ರೌಢ ಶಾಲೆ ವಿದ್ಯಾರ್ಥಿನಿಯರ ಸಾಧನೆ
ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಜೊಲ್ಲೆ ಎಜ್ಯುಕೇಶನ್ ಸೊಸಾಯಿಟಿ ಶಿವಶಂಕರ ಜೊಲ್ಲೆ ಕನ್ನಡ ಪ್ರೌಢ ಶಾಲೆ ಯಕ್ಸಂಬಾ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಕು, ಶ್ರೇಯಾ ಪಾಟೀಲ ರಾಜ್ಯಮಟ್ಟಕ್ಕೆ ದ್ವೀತಿಯ ಸ್ಥಾನ ಪಡೆದಿದ್ದಾರೆ.
2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿನಿಯಾದ ಕು. ಶ್ರೇಯಾ ನಿರಂಜನ ಪಾಟೀಲ (99.84%) ಪಡೆದು ರಾಜ್ಯಕ್ಕೆ ದ್ವೀತಿಯ ಸ್ಥಾನ ಹಾಗೂ ಶಾಲೆಗೆ ಪ್ರಥಮ ಸ್ಥಾನ, ಕು. ಸಂಚಿತಾ ಮಹೇಶ ಖೋತ (99.36%) ಶಾಲೆಗೆ ದ್ವಿತೀಯ ಸ್ಥಾನ, ಕು. ಕೌಸಲ್ಯ ಶ್ರೀಮಂತ ಚೌಗಲೆ (97.92%) ಶಾಲೆಗೆ ತೃತೀಯ ಸ್ಥಾನ ಪಡೆದಿರುತ್ತಾರೆ.
ಒಟ್ಟು ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಹಾಗೂ 22 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಪಡೆದು ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದುಕೊಟ್ಟಿದ್ದಾರೆ.
ಈ ಎಲ್ಲ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಸ್ಥಾಪಕರು ಹಾಗೂ ಚಿಕ್ಕೋಡಿ ಸಂಸದರಾದ, ಅಣ್ಣಾಸಾಹೇಬ ಶಂಕರ ಜೊಲ್ಲೆ, ಹಾಗೂ ಸಂಸ್ಥೆಯ ಅಧ್ಯಕ್ಷರು ಹಾಗೂ ಕರ್ನಾಟಕ ಸರ್ಕಾರದ ಮುಜರಾಯಿ ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ, ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ, ಆಶಾಜ್ಯೋತಿ ವಿಶೇಷ ಮಕ್ಕಳ ವಸತಿ ಶಾಲೆಯ ಅಧ್ಯಕ್ಷರಾದ ಕು, ಜ್ಯೋತಿಪ್ರಸಾದ ಅಣ್ಣಾಸಾಹೇಬ ಜೊಲ್ಲೆ, ಬಸವಜ್ಯೋತಿ ಯುಥ್ ಪೌಂಡೇಶನ್ ಅಧ್ಯಕ್ಷರಾದ ಕು, ಬಸವಪ್ರಸಾದ ಅಣ್ಣಾಸಾಹೇಬ ಜೊಲ್ಲೆ, ಸಂಸ್ಥೆಯ ಸಿ.ಇ.ಓ ಶ್ರೀ ವಿವೇಕಾನಂದ ಬಂಕ್ಕೊಳ್ಳಿ, ಶಾಲೆಯ ಆಡಳಿತ ಮಂಡಳಿಯ ಸದಸ್ಯರು, ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂಧಿ ವರ್ಗದವರು ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದ್ದಾರೆ.
ಪಿಯುಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ