Latest

ಎಸ್ ಎಸ್ ಎಲ್ ಸಿ ಫಲಿತಾಂಶಕ್ಕೆ ದಿನಗಣನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಸ್​ಎಸ್​ಎಲ್​​ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ವಿವಿಧೆಡೆಯ ಐದು ಎಸ್​ಎಸ್​ಎಲ್​​ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಮೌಲ್ಯಮಾಪನ ಪ್ರಕ್ರಿಯೆಯನ್ನು ವೀಕ್ಷಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಸುರೇಶ್​ ಕುಮಾರ್​, ಇನ್ನು, 10 ದಿನಗಳಲ್ಲಿ ರಾಜ್ಯದ ಎಲ್ಲ ಕೇಂದ್ರಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, 8.5 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸುವ ಆಲೋಚನೆಯಿದೆ ಎಂದರು.

Related Articles

ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ. ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಮುಗಿಯಲಿದೆ ಎಂದು ಮಾಹಿತಿ ನೀಡಿದರು.

Home add -Advt

Related Articles

Back to top button