Education

*SSLC ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಪಂ ಸಿಇಒ ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರ ವಲಯದ ಮರಾಠ ಮಂಡಳ ಸಂಯುಕ್ತ ಪದವಿ ಪೂರ್ವ ಶಾಲೆಯಲ್ಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಬುಧವಾರ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಭೇಟಿ ನೀಡಿ ಪರಿಶೀಲಿಸಿದರು. 

ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿದ ಸಿಸಿಟಿವಿ ಹಾಗೂ ಪರೀಕ್ಷಾ ಕೇಂದ್ರದಲ್ಲಿ ಏರ್ಪಡಿಸಿದ ವ್ಯವಸ್ಥೆಯ ಕುರಿತು ಪರಿಶೀಲನೆ ನಡೆಸಿದರು. ಈ ವಿಜ್ಞಾನ ಪರೀಕ್ಷೆಗೆ 607 ವಿದ್ಯಾರ್ಥಿಗಳ ಪೈಕಿ 592 ಜನ ವಿದ್ಯಾರ್ಥಿಗಳು ಹಾಜರಾಗಿದ್ದರು. 15 ವಿದ್ಯಾರ್ಥಿಗಳು ಗೈರಾಗಿದ್ದರು. 

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಭಜಂತ್ರಿ, ಜಿಲ್ಲಾ ನೋಡಲ್ ಅಧಿಕಾರಿ ಎನ್. ಆರ್. ಪಾಟೀಲ್, ಮರಾಠ ಮಂಡಳ ಕೇಂದ್ರ ಮುಖ್ಯ ಅಧೀಕ್ಷಕರಾದ ಲತಾ ಶಿಂಧೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button