LatestUncategorized

*ಹೃದಯಾಘಾತ: SSLC ವಿದ್ಯಾರ್ಥಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಇತ್ತೀಚೆಗೆ ಹೃದಯಾಘಾತದಿಂದ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಅಂಥದ್ದೇ ಇನ್ನೊಂದು ದುರಂತ ಸಂಭವಿಸಿದ್ದು, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ.

10ನೇ ತರಗತಿಯ ಜಯಂತ್ ರಜತಾದ್ರಯ್ಯ ಮೃತ ವಿದ್ಯಾರ್ಥಿ. ಇಂದು ಬೆಳಿಗ್ಗೆ ಶಾಲೆಗೆ ಹೋಗಲು ಸಿದ್ಧತೆ ತಯಾರಾಗುತ್ತಿದ್ದ ವೇಳೆ ಬಾಲಕನಿಗೆ ಎಡೆನೋವು ಕಾಣಿಸಿಕೊಂಡಿದೆ. ತಕ್ಷಣ ಆತನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.

Home add -Advt

ಆದರೆ ಅಷ್ಟೊತ್ತಿಗಾಗಲೇ ವಿದ್ಯಾರ್ಥಿ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಇತ್ತೀಚಿನ ದಿನಗಳಲ್ಲಿ ಚಿಕ್ಕಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.

*ಶಾಸಕರ ಕಾರು ಡಿಕ್ಕಿಯಾಗಿ ವೃದ್ಧೆ ಸಾವು*

https://pragati.taskdun.com/bjp-mla-basavaraj-dadesugurcar-accidentwoman-deathkoppala/

Related Articles

Back to top button