Latest

*SSLC ವಿದ್ಯಾರ್ಥಿ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ.

16 ವರ್ಷದ ರಾಹುಲ್ ಮೃತ ವಿದ್ಯಾರ್ಥಿ. ಚಿಕ್ಕನಾಯಕನಹಳ್ಳಿ ಪಟ್ಟಣದ ಜಿ ಹೆಚ್ ಎಸ್ ನಲ್ಲಿ 10ನೇ ತರಗತಿ ಓದುತ್ತಿದ್ದ. ತಡರಾತ್ರಿ ಎದೆನೋವಿನಿಂದ ಬಳಲುತ್ತಿದ್ದ ರಾಹುಲ್ ನನ್ನು ಪೋಷಕರು ಹುಳಿಯಾರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.

Home add -Advt

ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button