Kannada NewsKarnataka NewsLatest

ಮಗುವಿಗೆ ಜನ್ಮ ನೀಡಿದ SSLC ವಿದ್ಯಾರ್ಥಿನಿ; ಸಹೋದರನಿಂದಲೇ ಕೃತ್ಯ;

ಪ್ರಾಂಶುಪಾಲ, ವಾರ್ಡನ್ ಸಸ್ಪೆಂಡ್


ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್ ಸಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ನಿಂಬರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾಲಕಿ ಹಾಸ್ಟೇಲ್ ನಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಳು. ಆದರೆ ಗರ್ಭಿಣಿಯಾಗಿ ಇದೀಗ ಹೆರಿಗೆಯಾಗಿದ್ದು, ಹಾಸ್ಟೇಲ್ ಹಾಗೂ ಶಾಲಾ ಆಡಳಿತ ಮಂಡಳಿಯ ಬೇಜವಾಬ್ದಾರಿ, ನಿರ್ಲಕ್ಷ ಹಿನ್ನೆಲೆಯಲ್ಲಿ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ.

Home add -Advt

ಅಪ್ರಾಪ್ತ ಬಾಲಕಿ ಸ್ಥಿತಿಗೆ ಕಾರಣನಾದ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿ ಅಫಜಲಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಓದುತ್ತಿದ್ದಳು. ಹತ್ತನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾಳೆ. ವಿಚಾರಣೆ ವೇಳೆ ಬಾಲಕಿಯ ದೊಡ್ಡಪ್ಪನ ಮಗನೆ ಈ ಕೃತ್ಯವೆಸಗಿರುವುದು ಬೆಳಕಿಗೆ ಬಂದಿದೆ.

ಸೊಲ್ಲಾಪುರ ಆಸ್ಪತ್ರೆಗೆ ಬಾಲಕಿ ದಾಖಲಾಗಿದ್ದು, ಆಸ್ಪತ್ರೆ ವೈದ್ಯರು ನೀಡಿದ ದೂರಿನ ಹಿನ್ನೆಲೆಯಲ್ಲಿ ಕಲಬುರ್ಗಿಯ ನಿಂಬರ್ಗಾ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಕರನ ಸಂಬಂಧ ಮೊರಾರ್ಜಿದೇಸಾಯಿ ಶಾಲೆಯ ಪ್ರಾಂಶುಪಾಲ ಹಾಗೂ ವಸತಿ ಶಾಲೆಯ ಪಾಲಕ ಇಬ್ಬರನ್ನು ಅಮಾನತು ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button