Education

*ಮುಂದಿನ ವರ್ಷದಿಂದ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಮಧು ಬಂಗಾರಪ್ಪ, ವಿದ್ಯಾರ್ಥಿಗಳಿಗೆ ಕ್ರ‍್ಪಾಂಕ ಅಥವಾ ಗ್ರೇಸ್ ಮಾರ್ಕ್ಸ್ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇರಲ್ಲ ಎಂದರು.

ಶಾಲಾ ಶಿಕ್ಷಣ ಇಲಾಖೆ ಈ ವರ್ಷ 1.70 ಲಕ್ಷ 10 ನೇ ತರಗತಿ ವಿದ್ಯಾರ್ಥಿಗಳಿಗೆ ಶೇ.20ರಷ್ಟು ಗ್ರೇಸ್ ಮಾರ್ಕ್ಸ್ ನೀಡಿತ್ತು. ಆದರೂ ಕಳೆದ ವರ್ಷಕ್ಕಿಂತ ಈ ವರ್ಷ ಶೇ.10ರಷ್ಟು ಫಲಿತಾಂಶ ಕುಸಿತವಾಗಿದೆ. ಈ ರೀತಿ ಗ್ರೇಸ್ ಮಾರ್ಕ್ಸ್ ನೀಡಿರುವ ವಿಚಾರ ತಿಳಿದು ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದರು. ಅಲ್ಲದೇ ಶಾಲಾ ಶಿಕ್ಷಣ ಇಲಾಖೆಯ ಈ ಕ್ರಮವನ್ನು ನಿಲ್ಲಿಸುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button