
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಫೀಸ್ ಸಮರಕ್ಕೆ ಎಸ್.ಎಸ್.ಎಲ್.ಸಿ ಪರೀಕ್ಷೆಯಿಂದ ವಂಚಿತಳಾದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊರಟಗೆರೆ ತಾಲೂಕಿನ ಹನುಮಂತಪುರದಲ್ಲಿ ನಡೆದಿದೆ.
ಎನ್.ಗ್ರೀಷ್ಮಾ ನಾಯಕ್ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ. ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಕಳೆದ ವರ್ಷದ ಶಾಲಾ ಶುಲ್ಕ, ವಸತಿ, ಊಟದ ಬಿಲ್ ಬಾಕಿ ಇತ್ತು. ಇದರಿಂದ ಈ ಬಾರಿ ಶಾಲೆಗೆ ಸೇರಲು ಅವಕಾಶ ನೀಡಿಲ್ಲ. ಅಲ್ಲದೇಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿಲ್ಲ. ಇದರಿಂದ ಮನನೊಂದ ವಿದ್ಯಾರ್ಥಿನಿ ಗ್ರೀಷ್ಮಾ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆಯೇ ಪೋಷಕರು ಮಗಳನ್ನು ರಕ್ಷಿಸಿದ್ದಾರೆ.
9ನೇ ತರಗತಿಯಲ್ಲಿ ಗ್ರೀಷ್ಮಾ ಶೇ.96ರಷ್ಟು ಅಂಕಗಳಿಸಿದ್ದಳು. ಆದಾಗ್ಯೂ ಶುಲ್ಕ ಪಾವತಿಸದ ಕಾರಣ ಎ.ಎಸ್.ಎಲ್.ಸಿ ಪರೀಕ್ಷೆಗೆ ವಿದ್ಯಾರ್ಥಿನಿಗೆ ಅವಕಾಶ ನೀಡಿಲ್ಲ. ವಿಷಯ ತಿಳಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿದ್ದು, ಬರುವ ಆಗಸ್ಟ್ ನಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ