
ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದೆ. ಆದರೆ ಪರೀಕ್ಷೆ ದಿನವೇ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.
ಸಾಗರದ ಅಂದೋಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರಶುರಾಮ್ ಬಾಬು ಆತ್ಮಹತ್ಯೆ ಮಾಡಿಕೊಂಡಿರುವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ.
ಆನಂದಪುರ ಕೆಪಿಎಸ್ ಸಿ ಶಾಲೆಯಲ್ಲಿ ಓದುತ್ತಿದ್ದ ಪರಶುರಾಮ್ ಪರೀಕ್ಷಾ ಭಯದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ