*ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಕ್ರಮವಹಿಸಿ: ಜಿಪಂ ಸಿಇಒ ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಸುಧಾರಣೆಗೆ ಈಗಿನಿಂದಲೇ ಎಲ್ಲ ಶಿಕ್ಷಕರು ಹಾಗೂ ಇಲಾಖೆಯ ಎಲ್ಲ ಹಂತದ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಸೂಚನೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆ ಕುರಿತು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು, ಎಲ್ಲ ಪ್ರೌಢಶಾಲೆಗಳ ಮುಖ್ಯಶಿಕ್ಷಕರು ಹಾಗೂ ಅನುಷ್ಟಾನ ಅಧಿಕಾರಿಗಳಿಗೆ ಬುಧವಾರ ಏರ್ಪಡಿಸಿದ್ದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. … Continue reading *ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಕ್ರಮವಹಿಸಿ: ಜಿಪಂ ಸಿಇಒ ರಾಹುಲ್ ಶಿಂಧೆ*