Latest

ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕ ನಿಗದಿ

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷಾ ದಿನಾಂಕ ಪ್ರಕಟವಾಗಿದ್ದು, ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಸಚಿವರು, ಶೇ.30ರಷ್ಟು ಪಠ್ಯ ಕಡಿಮೆ ಮಾಡಲಾಗಿದ್ದು, ಮುಂದಿನ ತರಗತಿ ಕಲಿಕೆಗೆ ಕೊರತೆಯಾಗದಂತೆ ಪಠ್ಯವಿಷಯ ಕಡಿಮೆ ಮಾಡಿದ್ದೇವೆ ಎಂದರು.

Home add -Advt

ಪರೀಕ್ಷೆ ಯಾವ ರೀತಿ ನಡೆಯಬೇಕು ಎಂಬ ಬಗ್ಗೆ ಪಿಯು ಬೋರ್ಡ್ ಹಾಗೂ ಎಸ್.ಎಸ್.ಎಲ್.ಸಿ ಬೋರ್ಡ್ ಗಳು ನಿರ್ಧರಿಸುತ್ತವೆ ಎಂದು ಹೇಳಿದರು.

Related Articles

Back to top button