EducationKannada NewsKarnataka NewsLatest

*SSLC ಹಾಗೂ ದ್ವಿತೀಯ PUC ಅಂತಿಮ ವೇಳಾ ಪಟ್ಟಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾ ಪಟ್ಟಿ ಪ್ರಕಟವಾಗಿದೆ.

Related Articles

ಮಾರ್ಚ್ 1ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಮಾರ್ಚ್ 25ರಿಂದ ಏಪ್ರಿಲ್ 6ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, 8,96,271 ವಿದ್ಯಾರ್ಥಿಗಳು ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿದ್ದಾರೆ. 2741 ಪರೀಕ್ಷಾ ಕೇಂದ್ರಗಳು ಇರಲಿವೆ. 6,98,624 ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.

Home add -Advt

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ:

01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ

04-03-2024 ಸೋಮವಾರ ಗಣಿತ ಪರೀಕ್ಷೆ

05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ

06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ

07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ

09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ

11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ

13-03-2024 ರಂದು ಇಂಗ್ಲಿಷ್ ಪರೀಕ್ಷೆ

15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ

16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ

18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ

20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ

22-03-2024 ರಂದು ಹಿಂದಿ ಪರೀಕ್ಷೆ

ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ

SSLC ಪರೀಕ್ಷೆಯ ವೇಳಾಪಟ್ಟಿ ದಿನಾಂಕ:

25-03-2024 ರ ಸೋಮವಾರ ಪ್ರಥಮ ಭಾಷೆ ಪರೀಕ್ಷೆ
-ಕನ್ನಡ,ತೆಲುಗು ,ಹಿಂದಿ,ಮರಾಠಿ, ತಮಿಳು,ಉರ್ದು,ಇಂಗ್ಲಿಷ್, +ಇಂಗ್ಲಿಷ್NCERT)

27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ

30-03-2024 ರಂದು ,ವಿಜ್ಞಾನ ,ರಾಜ್ಯಶಾಸ್ತ್ರ, ಪರೀಕ್ಷೆ

02-04-2024 ರಂದು ಗಣಿತ,ಸಮಾಜ ಶಾಸ್ತ್ರ ಪರೀಕ್ಷೆ

03-04-2024 ಅರ್ಥಶಾಸ್ತ್ರ ಪರೀಕ್ಷೆ

ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿರೋ ಪರೀಕ್ಷೆ

Related Articles

Back to top button