Education

*ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾ ಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

ಮಾರ್ಚ್ 1ರಿಂದ 19ರವರೆಗೆ ಪಿಯುಸಿ ಪರೀಕ್ಷೆ ನಡೆಯಲಿದೆ. ಮಾರ್ಚ್ 20ರಿಂದ ಏಪ್ರಿಲ್ 2ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದೆ.

ವೇಳಾಪಟ್ಟಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರ ಆಕ್ಷೇಪಣೆ ಇದ್ದಲ್ಲಿ ಡಿ.2ರಿಂದ 16ರವರೆಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.

ಪರೀಕ್ಷಾ ವೇಳಾಪಟ್ಟಿ kseab.karnataka.gov.in ವೆಬ್ ಸೈಟ್ ನಲ್ಲಿ ಲಭ್ಯವಿರಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button