Latest

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸೂಚನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೂನ್ 25ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಳ್ಳಲು ಬಯಸಿದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಲಾಕ್ ಡೌನ್ ಹಿನ್ನಲೆಯಲ್ಲಿ ಈಗಾಗಲೇ ವಿದ್ಯಾರ್ಥಿಗಳು ತಮ್ಮ ತಮ್ಮ ಊರುಗಳಿಗೆ ತೆರಳಿದ್ದು, ಈ ಹಿನ್ನಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಶಾಲೆಯ ಮುಖ್ಯ ಶಿಕ್ಷಕರನ್ನು ದೂರವಾಣಿಯ ಮೂಲಕ ಸಂಪರ್ಕಿಸಿ ತಾವು ಸದ್ಯ ವಾಸ ಮಾಡುತ್ತಿರುವ ಮನೆಯ ಹತ್ತಿರದ ಪರೀಕ್ಷಾ ಕೇಂದ್ರವನ್ನು ಗುರುತಿಸಿ ಮುಖ್ಯ ಶಿಕ್ಷಕರ ಲಾಗಿನ್ ಮೂಲಕ ಬದಲಿಸಿಕೊಳ್ಳಬಹುದು. ಪರೀಕ್ಷಾ ಕೇಂದ್ರ ಬದಲಾವಣೆಗೆ ಮೇ 29ರವರೆಗೆ ಅವಕಾಶ ನೀಡಲಾಗಿದೆ. ಬದಲಾವಣೆ ಮಾಡಿಕೊಳ್ಳದಿದ್ದರೆ ಮೂಲ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Related Articles

ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಂಡರೂ ಹಳೆಯ ಪರೀಕ್ಷಾ ನೋಂದಣಿ ಸಂಖ್ಯೆ ಇರಲಿದೆ. ಮೊದಲಿಗೆ ವಿದ್ಯಾರ್ಥಿಗಳು ತಾವು ಓದಿದ ಶಾಲಾ ಮುಖ್ಯ ಶಿಕ್ಷಕರಿಗೆ ಕೇಂದ್ರ ಬದಲಾವಣೆ ಬಗ್ಗೆ ಮಾಹಿತಿ ನೀಡಬೇಕು. ಶಾಲಾ ಮುಖ್ಯಸ್ಥರು ಬದಲಾವಣೆ ಮಾಡಿದ ಕೇಂದ್ರದ ಮಾಹಿತಿಯನ್ನ ಎಸ್‍ಎಸ್‍ಎಲ್‍ಸಿ ಬೋರ್ಡಿಗೆ ಮಾಹಿತಿ ಕೊಡಬೇಕಾಗುತ್ತದೆ.

ಮಾರ್ಗಸೂಚಿ:
* ಈಗ ವಿದ್ಯಾರ್ಥಿಗಳು ಇರುವ ತಾಲೂಕು ಕೇಂದ್ರದಲ್ಲಿ ಪರೀಕ್ಷಾ ಕೇಂದ್ರ ಆಯ್ಕೆ ಮಾಡಿಕೊಳ್ಳಬಹುದು
* ಒಂದು ಬಾರಿ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಂದರೆ ಮತ್ತೆ ಬದಲಾವಣೆ ಅವಕಾಶ ಇಲ್ಲ
* ಹೊಸ ಕೇಂದ್ರ ಬದಲಾವಣೆ ನಂತರ ಹಳೆ ಕೇಂದ್ರದಲ್ಲಿ ಬರೆಯಲು ಅವಕಾಶ ಇರೋದಿಲ್ಲ
* ವಿದ್ಯಾರ್ಥಿಗಳ ರಿಜಿಸ್ಟರ್ ನಂಬರ್‌ನಲ್ಲಿ ಯಾವುದೇ ಬದಲಾವಣೆ ಇರೋದಿಲ್ಲ.
* ಕೇಂದ್ರ ಮಾತ್ರ ಬದಲಾವಣೆ ಮಾಡಿಕೊಳ್ಳಬಹುದು
* ಕೇಂದ್ರ ಬದಲಾವಣೆ ಯಾವುದೇ ಶುಲ್ಕ ಇರೋದಿಲ್ಲ
* ಕೇಂದ್ರ ಬದಲಾವಣೆ ಬಳಿಕ ಪ್ರವೇಶ ಪತ್ರ ಡೌನ್‍ಲೋಡ್‍ಗೆ ಅವಕಾಶ
* ಶಾಲಾ ಮುಖ್ಯ ಶಿಕ್ಷಕರು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ತಾಲೂಕಿನ ಬಿಇಓಗಳ ಮೂಲಕ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ನೀಡಿ ಎಸ್‍ಎಸ್‍ಎಲ್‍ಸಿ ಬೋರ್ಡ್ ಅಧಿಕೃತವಾಗಿ ಮಾಹಿತಿ ಬಿಡುಗಡೆ ಮಾಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button