EducationKarnataka NewsLatest

*ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಮುಖ್ಯ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ನಾಳೆಯಿಂದ ಎಸ್.​ಎಸ್.​ಎಲ್.​​ಸಿ ಪರೀಕ್ಷೆ ಆರಂಭವಾಗಲಿದ್ದು, ಒಟ್ಟು 2871 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಈ ಬಾರಿ 9,02,889 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಆ ಪೈಕಿ 8,12,855 ಹೊಸಬರು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅವು ಹೀಗೆದೆ:
ಪರೀಕ್ಷಾ ಕೇಂದ್ರಗಳಲ್ಲಿ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಮೊಬೈಲ್ ನಿರ್ಬಂಧ
ಸ್ಮಾಟ್ ವಾಚ್​, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ಪೂರ್ಣ ನಿಷೇಧ
ಪರೀಕ್ಷಾ ಕೇಂದ್ರದಲ್ಲಿ ಅನಧಿಕೃತ ವ್ಯಕ್ತಿಗಳಿಂದ ಚಿತ್ರೀಕರಣಕ್ಕೆ ನಿಷೇಧ
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತು ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದು ನಿಷೇಧ
ಯಾವುದೇ ವಿಷಯಗಳ ಮಾಹಿತಿ ರವಾನಿಸುವುದು ನಿಷೇಧ
ಪರೀಕ್ಷೆಯನ್ನು ವೆಬ್ ಕಾಸ್ಟಿಂಗ್​​​​ ಮೂಲಕ ಮಾನಿಟರ್
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯ

ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ:

ಈಗಾಗಲೇ ಬರೆದಿರುವ ಪೂರ್ವ ಸಿದ್ಧತಾ ಪರೀಕ್ಷೆಗಳು, ಮಂಡಳಿಯಿಂದ ನೀಡಲಾದ ನೀಲನಕ್ಷೆ ಮತ್ತು ಮಾದರಿ ಪ್ರಶ್ನೆಪತ್ರಿಕೆಗಳ ಮೇಲೆ ಹೆಚ್ಚು ಗಮನ ಹರಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಯಾವುದೇ ತಪ್ಪು ಮಾಹಿತಿ, ವದಂತಿಗಳಿಗೆ ಕಿವಿಗೊಡಬಾರದು. ಪರೀಕ್ಷೆ ಬರೆಯುವಾಗ ಶಾಂತಚಿತ್ತದಿಂದ ಇರಬೇಕು, ಪ್ರತಿ ಪ್ರಶ್ನೆಯನ್ನು ಒಂದು ಬಾರಿ ಓದಿ, ಅರ್ಥವಾಗದಿದ್ದರೆ ಮತ್ತೊಮ್ಮೆ ಓದಿ ಸರಿಯಾಗಿ ಅರ್ಥಮಾಡಿಕೊಂಡು ಉತ್ತರ ಬರೆಯಬೇಕು.

ಮಾದರಿ ಪ್ರಶ್ನೆಪತ್ರಿಕೆಗಳು ಮತ್ತು ಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಆಧಾರದ ಮೇಲೆ ಸಿದ್ಧರಾಗಿರುವ ವಿದ್ಯಾರ್ಥಿಗಳಿಗೆ ಉತ್ತಮ ಅಂಕಗಳನ್ನು ಗಳಿಸುವ ಮತ್ತು ಸುಲಭವಾಗಿ ಪಾಸಾಗುವ ಹೆಚ್ಚಿನ ಅವಕಾಶಗಳಿವೆ ಎಂದು ಇಲಾಖೆ ತಿಳಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button