Education

*SSLC ವಿದ್ಯಾರ್ಥಿಗಳ ಗಮನಕ್ಕೆ; ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಡೆಸುವ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-1ರಲ್ಲಿ ಅನುತ್ತೀರಣರಾದ ಹಾಗೂ C ಹಾಗೂ C+ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2ರಲ್ಲಿ ಉತ್ತಮ ಅಂಕಗಳನ್ನು ಗಳಿಸುವ ನಿಟ್ಟಿನಲ್ಲಿ ತಯಾರಿ ನಡೆಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಮೇ 15ರಿಂದ ಜೂನ್ 5ರವರೆಗೆ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ ಸರ್ಕಾರದ ಸೂಚನೆ ಅನ್ವಯ ಈ ಬೋಧನಾ ತರಗತಿ ದಿನಾಂಕ ಮುಂದೂಡಲಾಗಿದೆ.

ಮೇ 29ರಿಂದ ಜೂನ್ 13ರವರೆಗೆ ನಡೆಸಲು ತಿಳಿಸಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-2 ಜೂನ್ 14ರಿಂದ ಆರಂಭವಾಗಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button