ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸುತ್ತಿದ್ದು, ಈ ಕೆಳಕಂಡ ಬದಲಾವಣೆಗಳನ್ನೊಳಗೊಂಡಂತೆ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ಶಿಕ್ಷಣ ಇಲಾಖೆ ಸೂಚಿಸಿದೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಿಂದ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವುದರ ಬದಲಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹಂತದಲ್ಲಿ ವಾರ್ಷಿಕ ಪರೀಕ್ಷೆಯ ಮಾದರಿಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್ ಗೆ ಕಳುಹಿಸಲು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಮುದ್ರಿಸಿ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ.
ಪ್ರತಿ ವಿದ್ಯಾರ್ಥಿಯಿಂದ ರೂ 60ರ ಬದಲಾಗಿ ರೂ.50 ನ್ನು ಸಂಗ್ರಹಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ ಹೊರಡಿಸಿದ್ದಾರೆ.
*SSLC ಪೂರ್ವಭಾವಿ ಪರೀಕ್ಷೆ; ಮಹತ್ವದ ಬದಲಾವಣೆ ಮಾಡಿ ಆದೇಶ ಹೊರಡಿಸಿದ ಶಿಕ್ಷಣ ಸಚಿರು
*ಸಿದ್ದರಾಮಯ್ಯ ವಿರುದ್ಧ ಕೋಲಾರದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಿಗೆ BJP ಟಿಕೆಟ್ ಆಫರ್*
https://pragati.taskdun.com/siddaramaiahkolarabjpkrishna-reddyoffer/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ