LatestUncategorized

*SSLC ಪೂರ್ವ ಸಿದ್ಧತಾ ಪರೀಕ್ಷೆಗೂ ತಟ್ಟಿದ ಮುಷ್ಕರದ ಬಿಸಿ; ಎಕ್ಸಾಂ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 7ನೇ ವೇತನ ಆಯೋಗದ ಮಧ್ಯಂತರ ವರದಿ ಜಾರಿಗೆ ಆಗ್ರಹಿಸಿ ರಾಜ್ಯಾದ್ಯಂತ ಸರ್ಕಾರಿ ನೌಕರರು ಆರಂಭಿಸಿರುವ ಮುಷ್ಕರದ ಬಿಸಿ ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆಗೂ ತಟ್ಟಿದೆ.

ಇಂದು ಎಸ್.ಎಸ್.ಎಲ್.ಸಿ ಹಿಂದಿ ವಿಷಯದ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಬೇಕಿತ್ತು. ಆದರೆ ಪರೀಕ್ಷೆ ಮುಂದೂಡಲಾಗಿದೆ. ಮುಷ್ಕರಕ್ಕೆ ಪ್ರೌಢ ಶಾಲಾ ಶಿಕ್ಷಕರ ಸಂಘ ಬೆಂಬಲ ಸೂಚಿಸಿದ್ದು, 80 ಸಾವಿರ ಶಿಕ್ಷಕರು ಶಾಲೆಗೆ ಗೈರಾಗಿದ್ದಾರೆ.

ಇಂದಿನ ಎಸ್ ಎಸ್ ಎಲ್ ಸಿ ಪರೀಕ್ಷೆಗೆ 8.40 ಲಕ್ಷ ವಿದ್ಯಾರ್ಥಿಗಳು ಹಾಜರಾಗಬೇಕಿತ್ತು. ಆದರೆ ಪರೀಕ್ಷೆ ಮುಂದೂಡಲ್ಪಟ್ಟಿದೆ.

*ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ಆರಂಭ*

Home add -Advt

https://pragati.taskdun.com/7th-pay-commissiongovt-employeesstrike/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button