Latest

SSLC, PUC ಪರೀಕ್ಷೆ ವಿಚಾರ; ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ; ಹೆಚ್.ಡಿ.ಕೆ ಕಿಡಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋವಿಡ್‌ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ. ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ ಕಂಡು ರಾಜ್ಯದ ಜನತೆ ಹಾದಿ ಬೀದಿಯಲ್ಲಿ ನಗಾಡುವಂತಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮಕ್ಕಳ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಬಿಟ್ಟು, ಶಿಕ್ಷಣ ಸಚಿವರು ಎಡಬಿಡಂಗಿ ನಿರ್ಧಾರ ತೆಗೆದು ಕೊಂಡಿರುವುದಕ್ಕೆ ಮುಖ್ಯಮಂತ್ರಿಗಳು ಕಡಿವಾಣ ಹಾಕಬೇಕು. ಎಸ್‌ಎಸ್ಎಲ್‌ಸಿ ಮತ್ತು ಪಿಯುಸಿ ಮಕ್ಕಳಿಗೆ ಏಕರೂಪ ಪರೀಕ್ಷಾ ಪದ್ಧತಿಯನ್ನು ಜಾರಿಗೆ ತರಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ ಎಂದಾದರೆ ಅದು ಅವರಿಗಿಂತ ಕಿರಿಯರಾದ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳಿಗೂ ಅನ್ವಯಿಸಬೇಕು ಎಂದು ಆಗ್ರಹಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿದ್ದಕ್ಕೆ ಪ್ರಧಾನಮಂತ್ರಿಯ ‘ಗುಮ್ಮ’ ಕಾರಣ. ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವ ಬೃಹಸ್ಪತಿ ಶಿಕ್ಷಣ ಸಚಿವರೋ? ಪೋಷಕರು, ವಿದ್ಯಾರ್ಥಿಗಳ ತಾಳ್ಮೆ ಕೆಣಕುವ ಪರೀಕ್ಷಾ ಮಂತ್ರಿಯೋ ? ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ವಿಷಯದಲ್ಲಿ ಮೌನಿ ಆಗಿರುವ ಶಿಕ್ಷಣ ಸಚಿವರು ಬಿಸಿ ಊಟ ಸಿಗದೆ ಕಂಗಾಲಾಗಿರುವ ಬಡ ವಿದ್ಯಾರ್ಥಿಗಳ ಬಗ್ಗೆ ಮಾತನಾಡುತ್ತಿಲ್ಲ. ಈಗ ಪರೀಕ್ಷೆ ಬಗ್ಗೆ ಎಡಬಿಡಂಗಿತನದ ನಿರ್ಧಾರ ಕೈಗೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳಿಗೆ ಎರಡೇ ದಿನ ಪರೀಕ್ಷೆ; 2nd ಪಿಯು ಪರೀಕ್ಷೆ ರದ್ದು

Home add -Advt

Related Articles

Back to top button