Latest

ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆ ಶೀಘ್ರ ನಿರ್ಧಾರ: ಮಾರ್ಚ್ ನಲ್ಲಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾರ್ಚ್ 2021ರಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸಂವಾದದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಹೊರೆಯಾಗದಂತೆ ಪಠ್ಯಕ್ರಮಗಳನ್ನು ಅಂತಿಮಗೊಳಿಸಲಾಗುತ್ತಿದ್ದು, ಕನಿಷ್ಟ ಕಲಿಕೆಗೆ ಒತ್ತು ನೀಡಲಾಗುತ್ತದೆ ಎಂದು ಹೇಳಿದರು.

Home add -Advt

ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನು ಸಹ ಗಮನದಲ್ಲಿಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮತ್ತೆ ಕೊರೋನಾ ಗಡಿ ಬಿಡಿ: ಹಲವು ಕಠಿಣ ಕ್ರಮ ಜಾರಿ

 

Related Articles

Back to top button