EducationKarnataka NewsLatest

*ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ*: *ಪರೀಕ್ಷಾ ನೋಂದಣಿ ಆರಂಭ*

ಪ್ರಗತಿವಾಹಿನಿ ಸುದ್ದಿ: 2027ರ ಮಾರ್ಚ್–ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಹತ್ವದ ಮಾಹಿತಿ ನೀಡಿದೆ.

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಎದುರು ನೋಡುತ್ತಿರುವ 2027ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಸಿದ್ಧತೆ ಆರಂಭವಾಗಿದೆ. ಇದರ ಭಾಗವಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2027ರ ಮಾರ್ಚ್–ಏಪ್ರಿಲ್‌ನಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಅಭ್ಯರ್ಥಿಗಳ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಪರೀಕ್ಷಾರ್ಥಿಗಳ ನೋಂದಣಿ ಪ್ರಕ್ರಿಯೆ ಆರಂಭಿಸಿದ್ದು, ನವೆಂಬರ್ 11ರವರೆಗೆ ನೋಂದಣಿಗೆ ಅವಕಾಶ ಕಲ್ಪಿಸಿದೆ. ಹೊಸ ವಿದ್ಯಾರ್ಥಿಗಳು, ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಖಾಸಗಿ ಅಭ್ಯರ್ಥಿಗಳು ನಿಗದಿತ ಮಾರ್ಗಸೂಚಿಯಂತೆ ನೋಂದಣಿ ಮಾಡಿಕೊಳ್ಳಬೇಕಿದೆ.

ಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಸಂಸ್ಥೆಗಳ ಲಾಗಿನ್ ಮೂಲಕ ನೋಂದಣಿ ಕಾರ್ಯವನ್ನು ಆರಂಭಿಸಬಹುದಾಗಿದೆ.

2027ರ ಮಾರ್ಚ್–ಏಪ್ರಿಲ್‌ನಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಿಗೆ ಅಭ್ಯರ್ಥಿಗಳ ನೋಂದಣಿ ಮಾಡಿಕೊಳ್ಳಲು ನವೆಂಬರ್ 11ರವರೆಗೆ ಅವಕಾಶ ನೀಡಲಾಗಿದೆ.

ಶಾಲಾ ಮುಖ್ಯ ಶಿಕ್ಷಕರು ಮತ್ತು ಕಾಲೇಜುಗಳ ಪ್ರಾಂಶುಪಾಲರು ಮಂಡಳಿಯ ಸೂಚನೆಗಳನ್ನು ಅನುಸರಿಸಿ ವಿದ್ಯಾರ್ಥಿಗಳ ನೋಂದಣಿ ಕಾರ್ಯವನ್ನು ಕೈಗೊಳ್ಳಬೇಕು. ವಿದ್ಯಾರ್ಥಿಗಳ ಮಾಹಿತಿಯನ್ನು ಸರಿಯಾಗಿ ನಮೂದಿಸುವುದರ ಜೊತೆಗೆ, ಈಗಾಗಲೇ ದಾಖಲಾಗಿರುವ ವಿವರಗಳನ್ನು ಪರಿಶೀಲಿಸಿ ಅಗತ್ಯವಿದ್ದರೆ ತಿದ್ದುಪಡಿ ಪ್ರಕ್ರಿಯೆಯನ್ನು ಮುಂಚಿತವಾಗಿ ಪೂರ್ಣಗೊಳಿಸಬೇಕು.

ಕೊನೆಯ ದಿನದವರೆಗೆ ಕಾಯದೆ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದರಿಂದ ಕೊನೆಯ ಕ್ಷಣದ ತಾಂತ್ರಿಕ ಸಮಸ್ಯೆಗಳನ್ನು ತಪ್ಪಿಸಬಹುದು. ಖಾಸಗಿ ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ತಮ್ಮ ನೋಂದಣಿಗೆ ಅನ್ವಯಿಸುವ ನಿರ್ದಿಷ್ಟ ಮಾರ್ಗಸೂಚಿಗಳನ್ನು ಪರಿಶೀಲಿಸಿಕೊಳ್ಳುವುದು ಅಗತ್ಯವಾಗಿದೆ.

ವಿದ್ಯಾರ್ಥಿಗಳ ಮಾಹಿತಿಯಲ್ಲಿ ಬದಲಾವಣೆ ಮಾಡಲು ಅವಕಾಶವಿಲ್ಲ

ಈ ನೋಂದಣಿ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲಾ ಆಡಳಿತ ಮಂಡಳಿಗಳು ಗಮನಿಸಬೇಕಾದ ಪ್ರಮುಖ ಅಂಶವೆಂದರೆ, ವಿದ್ಯಾರ್ಥಿಗಳ ಬಹುತೇಕ ಮಾಹಿತಿಯನ್ನು ಎಸ್‌ಎಟಿಎಸ್‌ (SAT​​S) ತಂತ್ರಾಂಶದ ಮೂಲಕ ಪಡೆಯಲಾಗುತ್ತದೆ.

ಹೀಗಾಗಿ, ನೋಂದಣಿ ವೇಳೆ ಕೆಳಗಿನ ವಿವರಗಳನ್ನು ನೇರವಾಗಿ ಬದಲಾಯಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಲಾಗಿದೆ.

– ವಿದ್ಯಾರ್ಥಿಯ ಹೆಸರು

– ತಂದೆಯ ಹೆಸರು

– ತಾಯಿಯ ಹೆಸರು

– ಜನ್ಮ ದಿನಾಂಕ

– ಪ್ರವರ್ಗ

– ಧರ್ಮ

– ಲಿಂಗ

– ಬೋಧನಾ ಮಾಧ್ಯಮ

ಈ ವಿವರಗಳಲ್ಲಿ ತಪ್ಪುಗಳಿದ್ದರೆ, ಪರೀಕ್ಷೆಗೆ ನೋಂದಣಿ ಮಾಡುವಾಗಲೇ ಅವುಗಳನ್ನು ಸರಿಪಡಿಸಲು ಪ್ರಯತ್ನಿಸುವ ಬದಲು ಮೊದಲು ಎಸ್‌ಎಟಿಎಸ್‌ ತಂತ್ರಾಂಶದಲ್ಲಿ ಅಗತ್ಯ ತಿದ್ದುಪಡಿ ಮಾಡಿಸಬೇಕು. ತಿದ್ದುಪಡಿ ಪೂರ್ಣಗೊಂಡ ಬಳಿಕವೇ ಪರೀಕ್ಷಾ ನೋಂದಣಿ ಪ್ರಕ್ರಿಯೆಯನ್ನು ಮುಂದುವರಿಸಬೇಕು ಎಂದು ಸೂಚಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button