ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜುಲೈ ಮೂರನೇ ವಾರದಲ್ಲಿ ಪಿಯುಸಿ ಫಲಿತಾಂಶದ ಬಳಿಕ ಆಗಸ್ಟ್ ಮೊದಲ ವಾರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಬಿಡುಗಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಆಗಸ್ಟ್ ಮೊದಲ ವಾರದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಮತ್ತು ಜುಲೈ ಮೂರನೇ ವಾರದಲ್ಲಿ ಪಿಯುಸಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗುವುದು. ಈಗ ಪರೀಕ್ಷೆಯಿಂದ ಹೊರಗುಳಿದಿದ್ದ 33 ಮಕ್ಕಳಿಗೆ ಆಗಸ್ಟ್ ತಿಂಗಳ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು, ಜೊತೆಗೆ ಆ ವಿದ್ಯಾರ್ಥಿಗಳನ್ನು ಫ್ರೆಶ್ ಕ್ಯಾಂಡಿಡೆಟ್ ಎಂದು ಪರಿಗಣನೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಇಂದು ಆನೇಕಲ್ ತಾಲೂಕಿನ ಅತ್ತಿಬೆಲೆ, ಚಂದಾಪುರ, ಸರ್ಜಾಪುರ, ದೊಮ್ಮಸಂದ್ರ ಸೇರಿ ಹಲವು ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿಕೊಟ್ಟ ಸಚಿವರು, ಪರೀಕ್ಷಾ ಕೇಂದ್ರದ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿದರು. ಜೊತೆಗೆ ಕರ್ತವ್ಯದಲ್ಲಿ ಹಾಜರಿದ್ದ ಸ್ಕೌಟ್ಸ್ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ