ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳನ್ನು ಮತ್ತೆ ಪರೀಕ್ಷೆಗೆ ಸಿದ್ಧಪಡಿಸುವ ನಿಟ್ಟಿನಲ್ಲಿ ಪುನರ್ ಮನನದ ತರಗತಿಗಳನ್ನು ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೊನಾ ಭೀತಿ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ದೀರ್ಘ ಕಾಲದ ರಜೆ ನೀಡಲಾಗಿದ್ದು, ಸುದೀರ್ಘ ರಜೆಯಿಂದ ಪರೀಕ್ಷೆಯ ಮನಸ್ಥಿತಿಗೆ ಮಕ್ಕಳನ್ನು ಕರೆತರುವ ಸಲುವಾಗಿ ಪರೀಕ್ಷೆಗೂ ಮುನ್ನ 1 ವಾರ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪುನರ್ ಮನನ ತರಗತಿ ನಡೆಯಲಿದೆ ಎಂದರು.
ಲಾಕ್ ಡೌನ್ ಅವಧಿ ಏ. 14ಕ್ಕೆ ಮುಗಿಯಾಲಿದ್ದು, ನಂತರ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದರು.
ಇದೇ ವೇಳೆ ದೆಹಲಿಯಲ್ಲಿ ಧಾರ್ಮಿಕ ಸಭೆ ಆಗದಿದ್ದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿತ್ತು. ಹಾಗೆಯೇ ಜುಬಿಲಿಯೆಂಟ್ ಪ್ರಕರಣದಿಂದ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ರಾಜ್ಯದಲ್ಲಿ ಕೊರೊನಾ ತಡೆಗಟ್ಟಲು ಅಗತ್ಯ ಕ್ರಮ ಕೈಗೊಂಡಿದ್ದು ಏ. 14ರವರೆಗೆ ಕೊರೊನಾ ನಿಯಂತ್ರಣಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ