EducationKarnataka NewsLatest

*BREAKING: ಎಸ್.ಎಸ್.ಎಲ್ ಸಿ ಫಲಿತಾಂಶ ಪ್ರಕಟ: ಬೆಳಗಾವಿಯ ರೂಪಾ ಚನಗೌಡ ಸೇರಿ 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್.ಎಸ್.ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈಬಾರಿ ದಾಖಲೆ ಮಟ್ಟದಲ್ಲಿ ಫಲಿತಾಂಶ ಬಂದಿರುವುದಾಗಿ ತಿಳಿದುಬಂದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ 2026ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿಯ ಮೌಲ್ಯಮಾಪನ ಪ್ರಕ್ರಿಯೆಯ ನಂತರ ಹೊರಬರುತ್ತಿರುವ ಮಾಹಿತಿ ಅನ್ವಯ, ರಾಜ್ಯದಲ್ಲಿ ದಾಖಲೆ ಮಟ್ಟದ ಫಲಿತಾಂಶ ಬಂದಿದ್ದು, ಈ ವರ್ಷದ ಒಟ್ಟಾರೆ ತೇರ್ಗಡೆ ಪ್ರಮಾಣ ಶೇ. 94.1 ರಷ್ಟಾಗಿದೆ. ಇದು ಕಳೆದ ಕೆಲವು ವರ್ಷಗಳ ಫಲಿತಾಂಶಕ್ಕೆ ಹೋಲಿಸಿದರೆ ಅತ್ಯುತ್ತಮವಾಗಿದೆ.

ವೆಬ್ ಸೈಟ್ ನಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ವೆಬ್ ಸೈಟ್ ಮೂಲಕ ಅಥವಾ ನೋಂದಾಯಿಸಿದ ಮೊಬೈಲ್ ಸಂಖ್ಯೆಗೆ ಎಸ್ ಎಂ ಎಸ್ ಮೂಲಕವಾಗಿಯೂ ಫಲಿತಾಂಶ ಪಡೆದುಕೊಳ್ಳಬಹುದು.

ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಬಹುದು. http://kseab.karnataka.gov.in, https://karresult.nic.net

Home add -Advt

ಮೂವರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕಗಳು ಲಭ್ಯವಾಗಿವೆ. ಬೆಳಗಾವಿಯ ರೂಪಾ ಚನಗೌಡ ಪಾಟೀಲ್, ಹಾಸನದ ಜಾನವಿ ಹಾಗೂ ಉತ್ಸವ್ ಪಾಟೀಲ್ ಸೇರಿ 7 ವಿದ್ಯಾರ್ಥಿಗಳು ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆ ದ್ವಿತೀಯ ಸ್ಥಾನದಲ್ಲಿದ್ದು, ಉತ್ತರ ಕನ್ನಡ ಜಿಲ್ಲೆ ಮೂರನೇ ಸ್ಥಾನದಲ್ಲಿದೆ.


Related Articles

Back to top button