
ಪ್ರಗತಿವಾಹಿನಿ ಸುದ್ದಿ: ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಮತ್ತೊಂದೆಡೆ ವಿದ್ಯಾರ್ಥಿಯೊಬ್ಬ ಫಲಿತಾಂಶಕ್ಕೆ ಭಯಗೊಂಡು ನಾಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೆಟ್ಟಹಳ್ಳಿಯಲ್ಲಿ ನಡೆದಿದೆ.
ಚಂದನ್ ಗೌಡ (16) ನಾಪತ್ತೆಯಾಗಿರುವ ವಿದ್ಯಾರ್ಥಿ. ಈತ ಸುರೇಶ್ ಹಾಗೂ ರೂಪಾ ದಂಪತಿಯ ಮಗನಾಗಿದ್ದು, ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿಯಾಗಿದ್ದ.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಿಂದ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಬೈರನಾಯಕನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ಅಲ್ಲಿಂದ ನಾಪತ್ತೆಯಾಗಿದ್ದಾನೆ.
ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ