Kannada NewsKarnataka NewsLatest

*ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ ಶಿಕ್ಷಣ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ದಿಢೀರ್ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

2025-26ನೇ ಸಾಲಿನ ಪರೀಕ್ಷಾ ಶುಲ್ಕವನ್ನು ಶೇ.5ರಷ್ಟು ಹೆಚ್ಚಳ ಮಾಡಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಆದೇಶ ಹೊರಡಿಸಿದೆ.

ಇದರ ಪ್ರಕಾರ 2025-26ನೇ ಸಾಲಿನಲ್ಲಿ ನಡೆಯಲಿರುವ ಎಲ್ಲಾ ಪರೀಕ್ಷೆಗಳಿಗೆ ಪ್ರಸ್ತುತ ಇರುವ ಶುಲ್ಕಕ್ಕೆ ಶೇ.5ರಷ್ಟು ಸೇರಿಸಿ ಶುಲ್ಕ ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Home add -Advt

ಪ್ರಥಮಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ 676 ರೂ ನಿಂದ 710 ರೂ ಇರಲಿದೆ.
ಹೊಸದಾಗಿ ನೋಮ್ದಣಿಯಾಗುವ ಖಾಸಗಿ ಅಭ್ಯರ್ಥಿಗಳ ನೋಂದಣಿ ಶುಲ್ಕ ಹಾಗೂ ಅರ್ಜಿ ಶುಲ್ಕ 236 ರೂನಿಂದ 248 ರೂಗಳಿಗೆ ಹೆಚ್ಚಳವಾಗಲಿದೆ.
ಈಗಾಗಲೇ ಖಾಸಗಿ ಅಭ್ಯರ್ಥಿಗಳಾಗಿ ನೋಂದಣಿಯಾಗಿರುವ ಅಭ್ಯರ್ಥಿಗಳು ಪಾವತಿಸಿದ ನೋಂದಣಿ ನವೀಕರಣ ಶುಲ್ಕ 69 ರೂನಿಂದ 72 ರೂಗ್ರ್ ಹೆಚ್ಚಳವಾಗಲಿದೆ.

ಎಸ್.ಎಸ್.ಎಲ್.ಸಿ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದಕ್ಕೆ ಪೋಷಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಪರೀಕ್ಷಾ ಶುಲ್ಕ ಹೆಚ್ಚಳ ಕ್ರಮ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.


Related Articles

Back to top button