*ನೇಣಿಗೆ ಶರಣಾದ SSLC ವಿದ್ಯಾರ್ಥಿನಿ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೊರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಾಲಕಿಯರ ಬಾಲಮಂದಿರದಲ್ಲಿ ನಡೆದಿದೆ. ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ತಂದೆ ಇರಲಿಲ್ಲ. ಹಾಗಾಗಿ ಬಾಲಕಿಯರ ಬಾಲಮಂದಿರದಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದಳು. ಆದರೆ ವಿದ್ಯಾರ್ಥಿನಿ ಏಕಏಕಿ ನೇಣಿಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. *SDPI ಕಚೇರಿಗಳ ಮೇಲೆ ಏಕಕಾಲದಲ್ಲಿ ED ದಾಳಿ* Home add -Advt