
ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಬ ಮೇಳದಲ್ಲಿ ಇಂದು ಬೆಳಗಿನ ಜಾವ ಕಾಲ್ತುಳಿತ ಸಂಭವಿಸಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ. ಕೆಲವರು ಸಾವಿಗೀಡಾಗಿರುವ ಶಂಕೆ ಇದ್ದು, ಇನ್ನೂ ಖಚಿತವಾಗಿಲ್ಲ.
ಬೆಳಗ್ಗೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸುಮಾರು 3 ಕೋಟಿಗೂ ಹೆಚ್ಚು ಜನರು ಸೇರಿದ್ದ ಕುಂಬ ಮೇಳದಲ್ಲಿ ಇದ್ದಕ್ಕಿದ್ದಂತೆ ನೂಕು ನುಗ್ಗಲು ಆರಂಭವಾಯಿತು. ಕೆಲವರು ಕೆಳಕ್ಕೆ ಬಿದ್ದರು, ಈ ವೇಳೆ ಕಾಲ್ತುಳಿತ ಸಂಭವಿಸಿತು.
ಅನೇಕರು ಗಾಯಗೊಂಡಿದ್ದು, ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸಾವಿನ ಬಗ್ಗೆ ಈವರೆಗೂ ಖಚಿತವಾಗಿಲ್ಲ.
ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಂದ ಮಾಹಿತಿ ಪಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ