Kannada NewsKarnataka NewsLatest
*ಕಾಲ್ತುಳಿತ ದುರಂತ: ನ್ಯಾ.ಮೈಕೆಲ್ ಕುನ್ಹಾ ಆಯೋಗದ ವರದಿಯಲ್ಲಿ ಮಹತ್ವದ ಅಂಶಗಳು ಉಲ್ಲೇಖ*

ಪ್ರಗತಿವಾಹಿನಿ ಸುದ್ದಿ: ಆರ್ ಸಿಬಿ ಸಂಭ್ರಮಾಚರಣೆಯ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಮೈಕೆಲ್ ಡಿ.ಕುನ್ಹಾ ನೇತೃತ್ವದ ತನಿಖಾ ಆಯೋಗ ವರದಿ ಸಲ್ಲಿಸಿದ್ದು, ಹಲವಾರು ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಕಾಲ್ತುಳಿತ ಪ್ರಕರಣಕ್ಕೆ ಕೆ ಎಸ್ ಸಿಎ, ಆರ್ ಸಿಬಿ, ಡಿಎನ್ ಎ ಹಾಗೂ ಪೊಲೀಸರೇ ನೇರ ಹೊಣೆ. ವಿಜಯೋತ್ಸವ ಕಾರ್ಯಕ್ರಮ ನಡೆಸುವುದು ಅಸಾಧ್ಯ ಎಂಬುದು ಗೊತ್ತಿದ್ದರೂ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಲಾಗಿದೆ.
ಎಲ್ಲರೂ ಶಾಮೀಲಾಗಿ ಕಾರ್ಯಕ್ರಮ ನಡೆಸಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬಂದೋಬಸ್ತ್ ವ್ಯವಸ್ಥೆ ಸಮರ್ಪಕವಾಗಿ ಇರಲಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.